ಕಾಂಗ್ರೆಸ್ ಪಕ್ಷ ಘೋಷಿಸಿರುವ ಯೋಜನೆ ಗಳ ಕುರಿತು ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ: ಬಿ.ಕೆ.ಮೋಹನ್

ವಿಜಯ ಸಂಘರ್ಷ
ಭದ್ರಾವತಿ: ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್‌ನಲ್ಲಿ ಘೋಷಿಸಿರುವ ಯೋಜನೆ ಗಳ ಕುರಿತು ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ, ಸಿಎಂ ಸಿದ್ದ ರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ನಗರಸಭೆ ಸದಸ್ಯ ಬಿ.ಕೆ ಮೋಹನ್ ಹೇಳಿದರು.

ಅವರು ಭಾನುವಾರ ನಗರದಕೆಎಸ್‌ಆರ್‌ ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಜೂ.11 ಮಹಿಳೆಯರು ಸಂಭ್ರಮಿಸುವ ದಿನವಾಗಿದೆ. ಸಿಎಂ ಸಿದ್ದರಾಮಯ್ಯ ನವರು ಆಡಳಿತದಲ್ಲಿ ಹೆಚ್ಚಿನ ಅನುಭವ ಹೊಂದಿ ದ್ದಾರೆ. ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿ ದಂತೆ ನಡೆಯಲಾಗುತ್ತಿದೆ. ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸದಸ್ಯರಾದ ಚನ್ನಪ್ಪ, ಗೀತಾ ರಾಜ್‌ಕುಮಾರ್, ಲತಾ ಚಂದ್ರಶೇಖರ್, ಶೃತಿ ವಸಂತ್, ಮಹಮದ್ ಯೂಸಫ್, ಉಪತಹಸೀಲ್ದಾರ್ ಮಂಜನಾಯ್ಕ, ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ರಂಗನಾಥ್ ಅಂತರಗಟ್ಟಿ,ಕಾಂಗ್ರೆಸ್ ಮುಖಂಡರಾದ ಎಚ್.ಎಲ್ ಷಡಾಕ್ಷರಿ, ಬಿ.ಕೆ ಜಗನ್ನಾಥ್, ಎಸ್. ಮಣಿಶೇಖರ್, ಅಮೀರ್‌ಜಾನ್, ವೈ.ಎಚ್ ನಾಗರಾಜ್, ಕೆಎಸ್‌ಆರ್‌ಟಿಸಿ ಭದ್ರಾವತಿ ಬಸ್ ಘಟಕದ ವ್ಯವಸ್ಥಾಪಕಿ ಅಂಬಿಕಾ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :+919743225795

Comments

Popular posts from this blog

ಭದ್ರಾವತಿ ಆಕಾಶವಾಣಿ ವಜ್ರ ಮಹೋತ್ಸವ ಸಂಭ್ರಮ